ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಾರಿ ಮಳೆ ಮುನ್ಸೂಚನೆ : ಎಲ್ಲೆಲ್ಲಿ ನೋಡಿ
ನಿರಂತರ ಮಳೆಯಿಂದಾಗಿ ಬೆಂಗಳೂರಿನಾದ್ಯಂತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸೋಮವಾರ ಮೈಸೂರು ರಸ್ತೆ, ತುಮಕೂರು ರಸ್ತೆ, ನೈಸ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನಗಳು ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದವು.
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಡಿಮೆ ಒತ್ತಡದ ಪ್ರದೇಶವಾಗಿ ದುರ್ಬಲಗೊಂಡಿರುವ ಫೆಂಗಲ್ ಚಂಡಮಾರುತದ ಅವಶೇಷಗಳ ಪರಿಣಾಮದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂವಚನೆ ನೀಡಿದೆ.
ಇದೇ ವೇಳೆ ಮೈಸೂರು ಮತ್ತು ಚಾಮರಾಜನಗರ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಡಿಸೆಂಬರ್ 3 ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರು ಅಂಗನವಾಡಿಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಡಿಸೆಂಬರ್ 3 ರಂದು ರಜೆ ಘೋಷಿಸಿದ್ದಾರೆ.
ಉಡುಪಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿದ್ಯಾಕುಮಾರಿ ಅವರು ಡಿಸೆಂಬರ್ 3 ರಂದು ಆರೆಂಜ್ ಅಲರ್ಟ್ ಮತ್ತು ಭಾರೀ ಮಳೆ ಮತ್ತು ಬಲವಾದ ಗಾಳಿಯ ನಿರೀಕ್ಷೆಯ ಕಾರಣ ಶಾಲಾ ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಚಂಡಮಾರುತದ ಪರಿಣಾಮವು ಪ್ರಬಲವಾಗಿ ಉಳಿದಿದೆ, IMD ಯ ಆರೆಂಜ್ ಅಲರ್ಟ್ ಅನ್ನು ಅನುಸರಿಸಿ ಡಿಸೆಂಬರ್ 3 ರಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರಜೆ ಘೋಷಿಸಿದ್ದಾರೆ.