ಸ್ಪಂದನಾ ಸಾವಿನ ಬೆನ್ನಲ್ಲೇ ಮಂಡ್ಯ ಮೂಲದ ಕಿರುತೆರೆ ಯುವ ನಟ ಹೃದಯಾಘಾತದಿಂದ ನಿಧನ
ಇತ್ತೀಚಿಗೆ ಹೃದಯಾಘಾತದಿಂದ ನಿಧನ ಆಗುವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಯುವ ವಯಸ್ಸಿನಲ್ಲೇ ಹೃದಯಾಘಾತ ಕ್ಕೆ ಸಾವು ಅಪ್ಪುವರ ಸಂಖ್ಯೆ ಹೆಚ್ಚಾಗಿದೆ
ಹೃದಯಾಘಾತ ಪ್ರಕರಣ ಹೆಚ್ಚುತ್ತಿದೆ. ಯುವಕರು ಹೃದಯಾಘಾತದಿಂದ ಮೃತಪಡುತ್ತಿದ್ದಾರೆ. ಇತ್ತೀಚೆಗೆ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಕೂಡ ಹಾರ್ಟ್ ಅಟ್ಯಾಕ್ನಿಂದ ಮೃತಪಟ್ಟರು. ಈ ನೋವು ಕಡಿಮೆ ಆಗುವ ಮೊದಲೇ ಕಿರುತೆರೆ ನಟ ಪವನ್ ಅವರು ಮೃತಪಟ್ಟಿದ್ದಾರೆ. ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 25 ವರ್ಷ ವಯಸ್ಸಾಗಿತ್ತು.
ಆಗಸ್ಟ್ 16ರಂದು ಪವನ್ ಮೃತಪಟ್ಟಿದ್ದಾರೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದೆ. ಕೆಆರ್ ಪೇಟೆ ಮೂಲದವರಾದ ಪವನ್ ಮಹಾರಾಷ್ಟ್ರದಲ್ಲಿ ನೆಲೆಯೂರಿದ್ದರು. ಹಿಂದಿ, ತಮಿಳು ಕಿರುತೆರೆಯಲ್ಲಿ ಪವನ್ ನಟಿಸುತ್ತಿದ್ದರು. ಬೆಳ್ಳಿ ಪರದೆಮೇಲೆ ಮಿಂಚಬೇಕು ಎಂದು ಕನಸು ಕಂಡಿದ್ದರು. ಹುಟ್ಟೂರು ಎನ್ನುವ ಕಾರಣಕ್ಕೆ ಪವನ್ ಮೃತದೇಹವನ್ನು ಮಂಡ್ಯಕ್ಕೆ ತರಲಾಗಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಅಂತ್ಯಕ್ರಿಯೆ ನೆರವೇರಲಿದೆ.
.