ಮಗನ ಶಿಕ್ಷಣ ವೆಚ್ಚ ಭರಿಸಲಾಗದೇ ಜೀವತೆತ್ತ ಅಮ್ಮ; ಹೃದಯ ವಿದ್ರಾವಕ ಘಟನೆ ; ವಿಡಿಯೋ ನೋಡಿ

ಮಗನ ಶಿಕ್ಷಣ ವೆಚ್ಚ ಭರಿಸಲಾಗದೇ ಜೀವತೆತ್ತ ಅಮ್ಮ; ಹೃದಯ ವಿದ್ರಾವಕ ಘಟನೆ ; ವಿಡಿಯೋ ನೋಡಿ

ಹೌದು ಗೆಳೆಯರೇ ತಾಯಿ ಎಂದರೆ ಹಾಗೇನೇ ತಮ್ಮ ಮಕ್ಕಳ ಸುಖಕೊಸ್ಕರ ಎಂತಹ ತ್ಯಾಗಕ್ಕಾಗದರು ಸಿದ್ಧರಾಗುತ್ತಾರೆ . ಆದರೆ ಈ ತರಹ ನಿರ್ಧಾರ ಯಾವ ತಾಯಿ ಸಹ ಮಾಡ ಬಾರದು. ಏನಿದು ಘಟನೆ ನೋಡಣ ಬನ್ನಿ .
ಮಗನ ಶಾಲಾ ಶುಲ್ಕ ಭರಿಸಲಾಗದೇ ತಾಯಿಯೊಬ್ಬಳು ಚಲಿಸುತ್ತಿದ್ದ ಬಸ್‌ನ ಮುಂದೆ ಹಾರಿ ಪ್ರಾಣಬಿಟ್ಟ ಮನ ಕಲಕುವ ಘಟನೆ ನೆರೆಯ ತಮಿಳುನಾಡಿನ ಸೇಲಂನಲ್ಲಿ ನಡೆದಿದ್ದು, ಮಾನವ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಮೃತ ಮಹಿಳೆಯನ್ನು 45ರ ಹರೆಯದ ಪಾಪತಿ ಎಂದು ಗುರುತಿಸಲಾಗಿದ್ದು, ಈಕೆ ಸೇಲಂನ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದರು

 ಮಗ ಕಾಲೇಜಿಗೆ ಹೋಗುವಷ್ಟು ದೊಡ್ಡವನಾಗಿದ್ದು, ಆತನ ಕಾಲೇಜು ಶುಲ್ಕ ಕಟ್ಟುವುದಕ್ಕೆ ದಿನಗೂಲಿ ಕೆಲಸ ಮಾಡುತ್ತಿದ್ದ ಮಹಿಳೆ ಪಾಪತಿಗೆ ಸಾಧ್ಯವಾಗಿರಲಿಲ್ಲ, ಹೀಗಾಗಿ ಮಗನ ಭವಿಷ್ಯ ಮುಂದೇನೋ ಎಂದು ಆಕೆ ಸಂಕಟಪಡುತ್ತಾ ಖಿನ್ನತೆಗೆ ಜಾರಿದ್ದಳು. ಈ ಮಧ್ಯೆ ಯಾರೋ ಆಕೆಗೆ ಯಾರೋ ನೀಡಬಾರದ ಸಲಹೆ ನೀಡಿದ್ದಾರೆ.  

ಅಪಘಾತದಲ್ಲಿ ಸತ್ತರೆ ಹಣ ಸಿಗುತ್ತದೆ. ನಿನ್ನ ಮಗನ ಕಾಲೇಜು ಶುಲ್ಕ ಪಾವತಿಯ ಜೊತೆ ಆತನ ಭವಿಷ್ಯವನ್ನು ಸರ್ಕಾರವೇ ನೋಡಿಕೊಳ್ಳುತ್ತದೆ ಎಂದು ಆಕೆಗೆ ಯಾರು ಸಹಾಯ ಮಾಡುವ ಬದಲು ಬಿಟ್ಟಿ ಸಲಹೆ ನೀಡಿದ್ದಾರೆ. ಇದನ್ನೇ ನಂಬಿದ ಆಕೆ ಚಲಿಸುತ್ತಿದ್ದ ಬಸ್‌ನ ಮುಂದೆ ಹಾರಿದ್ದು, ವೇಗವಾಗಿ ಬರುತ್ತಿದ್ದ ಬಸ್ ಪಾಪತಿಗೆ ಡಿಕ್ಕಿ ಹೊಡೆದಿದ್ದು, ಪಾಪತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಅಪಘಾತದ ದೃಶ್ಯ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಆಕೆಯ ಸಾವಿಗೆ ಕಾರಣ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. 

5 ಸೆಕೆಂಡ್‌ಗಳ ವೀಡಿಯೋದಲ್ಲಿ ಮಹಿಳೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದು, ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ಸನ್ನು ಗಮನಿಸಿದ ಆಕೆ ಬಸ್‌ ಹತ್ತಿರ ಸಮೀಪಿಸುತ್ತಿದ್ದಂತೆ ಬಸ್‌ನ ಮುಂದೆ ಹಾರಿದ್ದಾಳೆ. ಪರಿಣಾಮ ಬಸ್ ಡಿಕ್ಕಿಯಾಗಿ ಆಕೆ ಕೆಳಗೆ ಬಿದ್ದಿದ್ದು, ಬಸ್‌ನಲ್ಲಿದ್ದವರೆಲ್ಲಾ ಇಳಿದು ಹೋಗಿ ಆಕೆಯನ್ನು ನೋಡುತ್ತಿದ್ದಾರೆ.