ಮತ್ತೆ ಬಂತು ಎಲ್ಲರೂ ಮುಖ ಮುಚ್ಚಿಕೊಂಡು ಓಡಾಡುವ ಕಾಲ :ಹೊಸ ವರ್ಷ ಆಚರಣೆಗೆ ಯಾವುದೆಲ್ಲ ನಿರ್ಬಂಧ ಇದೆ ನೋಡಿ ?
ಇದುವರೆವಿಗೂ ಎಲ್ಲ ಸಾರ್ವಜನಿಕರು ಬಿಂದಾಸ್ ಆಗಿ ಯಾವುದೇ ಮಾಸ್ಕ ಧರಿಸದೇ ಎಲ್ಲ ಕಡೆ ಓಡಾಡುತ್ತಿದ್ದರು . ಈಗ ಚೀನಾ ಮತ್ತು ಇತರೆ ದೇಶಗಳಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ಸರ್ಕಾರ ಕೆಲವೊಂದು ನಿರ್ಬಂಧಗಳನ್ನು ವಿಧಿಸಿದೆ . ಅದು ಯಾವುದು ಎಂದು ತಿಳಿಯೋಣ ಬನ್ನಿ . ಎಲ್ಲದಕ್ಕೂ ಮುಖ್ಯವಾಗಿ ಮಾಸ್ಕ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ .
ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ ಬಾರ್, ಪಬ್ ಹಾಗೂ ಹೊಟೇಲ್ಗಳಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು ಮತ್ತು ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಹೇಳಿದರು.
ಎಷ್ಟು ಟೇಬಲ್ ಇದೆಯೋ ಅಷ್ಟು ಚೇರ್ಗೆ ಮಾತ್ರ ಅನುಮತಿ ನೀಡಲಾಗಿದೆ. ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವವರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರಗಳಿಗೆ ಈ ನಿಯಮ ಅನ್ವಯವಾಗುತ್ತದೆ ಎಂದರು.
ಸುಧಾಕರ್ ಅವರು ಇಂದು ಸುವರ್ಣ ಸೌಧದ ಸಮಿತಿ ಕೊಠಡಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಜೊತೆ, ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ವರ್ಚುವಲ್ ಮೂಲಕ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.
ಇನ್ನೂ ಹೆಚ್ಚಾಗಿ ಜನ ಒಂದೇ ಕಡೆ ಸೇರುವ ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲೂ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಚಿತ್ರಮಂದಿರಗಳಲ್ಲಿ ಮಾಸ್ಕ್ ಕಡ್ಡಾಯ. ಶಾಲಾ-ಕಾಲೇಜ್ನ ತರಗತಿಗಳಗೆ ವಿದ್ಯಾರ್ಥಿಗಳು ಪ್ರವೇಶಕ್ಕೂ ಮುಂಚೆ ಸ್ಯಾನಿಟೈಸ್ ಮಾಡುವುದು, ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.2019ರ ನಂತರ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನ ಎಲ್ಲ ಹೋಟೆಲ್ನವರು ಹೊಸ ವರ್ಷಾಚರಣೆಯನ್ನು ಜೋರಾಗಿ ಆಚರಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಹೊಟೇಲ್ಗಳಲ್ಲಿ ಸಿಸಿಕ್ಯಾಮರಾ ಅಳವಡಿಸಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕ್ರಿಮಿನಲ್ ಹಿನ್ನೆಲೆಯುಳ್ಳವರು ಬಂದಾಗ ಗಮನ ಹರಿಸುವಂತೆ ಹೊಟೇಲ್ ಮಾಲಿಕರಿಗೆ ಸೂಚಿಸಿದ್ದೇನೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
ಇದಕ್ಕೆ ನಿಮ್ಮ ಅಭಿಪ್ರಾಯ ತಿಳಿಸಿ ಮತ್ತು ಎಲ್ಲರಿಗೂ ಶೇರ್ ಮಾಡಿ