ಬೈಕ್ ಮೇಲೆ ಯುವತಿಯರ ಲಿಪ್ ಲಾಕ್ ; ಸ್ವಲ್ಪ ಯಾಮಾರಿದರೆ ನಿಮ್ಮ ಕಥೆ ಮುಗಿತು ಅಷ್ಟೇ ಅಂದ ನೆಟ್ಟಿಗರು : ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಈ ಬಾರಿ ಯುವತಿಯರಿಬ್ಬರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಈ ಕುರಿತು ವಿಡಿಯೋ ಒಂದು ವೈರಲ್ ಆಗಿದೆ.
ಹೌದು.. ಓಡುತ್ತಿರುವ ಬೈಕ್‌ನಲ್ಲಿ ಜೋಡಿಗಳು ತಮ್ಮ ಪ್ರೀತಿಯನ್ನು ಬಹಿರಂಗವಾಗಿ ವ್ಯಕ್ತಪಡಿಸುವ ಅನೇಕ ವೀಡಿಯೊಗಳನ್ನು ನಾವು ಇಂಟರ್ನೆಟ್‌ನಲ್ಲಿ ನೋಡಿದ್ದೇವೆ. ಆದರೆ ಈಗ ಸ್ವಲ್ಪ ವಿಭಿನ್ನವಾದ ವಿಡಿಯೋವೊಂದು ಹೊರಬಿದ್ದಿದೆ. ಇದರಲ್ಲಿ ಇಬ್ಬರು ಹುಡುಗಿಯರು ಮಾಡಿದ ತುಂಟಾಟ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಈ ವೈರಲ್ ವೀಡಿಯೊದಲ್ಲಿ, ಇಬ್ಬರು ಹುಡುಗಿಯರು ವೇಗವಾಗಿ ಬೈಕ್ ಚಲಿಸುತ್ತಿರುವುದುನ್ನ ಕಾಣಬಹುದು. ಅಲ್ಲದೆ, ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿ, ಪ್ರಾಣದ ಭಯ ತೊರೆದು ಪರಸ್ಪರ ಚುಂಬಿಸುವುದನ್ನು ಮತ್ತು ಅಪ್ಪಿಕೊಳ್ಳುವ ದೃಶ್ಯ ವಿಡಿಯೋದಲ್ಲಿದೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಘಟನೆ ಎಲ್ಲಿ ನಡೆದಿದೆ ಎಂದು ತಿಳಿದು ಬಂದಿಲ್ಲ.