ತಿರುಪತಿ ವೆಂಕಟೇಶ್ವರ ದೇಗುಲದ ಗರ್ಭಗುಡಿ 6-8 ತಿಂಗಳುಗಳ ಕಾಲ ಬಂದ್? ಕಾರಣ ಏನು ಗೊತ್ತಾ ಇಲ್ಲಿದೆ ನೋಡಿ ?

ತಿರುಪತಿ ವೆಂಕಟೇಶ್ವರ ದೇಗುಲದ ಗರ್ಭಗುಡಿ 6-8 ತಿಂಗಳುಗಳ ಕಾಲ ಬಂದ್? ಕಾರಣ ಏನು ಗೊತ್ತಾ ಇಲ್ಲಿದೆ ನೋಡಿ ?

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ಕೊಡದೆ ಇರುವರು ಯಾರು ಇಲ್ಲ ಅಂತಾನೆ ಹೇಳಬಹುದು . ಜೀವಮಾನದಲ್ಲಿ ಒಮ್ಮೆ ಆದರೂ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ಕೊಡ ಬೇಕು ಅಂತ ಎಲ್ಲರ ಆಶಯವಾಗಿರುತ್ತೆ . ಆದರೆ ಈಗ ಮೂಲ ವಿಗ್ರಹದ ಬದಲು ಅದರ ತದ್ರೂಪಿ ವಿಗ್ರಹ ದೇವಸ್ಥಾನದ ಪಕ್ಕದಲ್ಲಿ ಸ್ಥಾಪಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಟಿ) ನಿರ್ಧರಿಸಿದೆ , ಅದಕ್ಕೆ ಕಾರಣ ಇಲ್ಲಿದೆ ನೋಡಿ 

ತಿರುಮಲದ ಮುಖ್ಯ ಗರ್ಭಗುಡಿ ಮೇಲೆ ಇರುವ ವಿಮಾನ ಆಕೃತಿಯ(ಮೂರು ಅಂತಸ್ತು) ಗೋಪುರ ಆನಂದ ನಿಲಯಕ್ಕೆ ಹೊದಿಸಲಾಗಿದ್ದ ಚಿನ್ನದ ಲೇಪನವನ್ನು ಬದಲಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಟಿ) ನಿರ್ಧರಿಸಿದೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.ಈ ಕಾರಣಕ್ಕಾಗೇ ತಿರುಪತಿ ವೆಂಕಟೇಶ್ವರ ದೇಗುಲದ ಗರ್ಭಗುಡಿ 6-8 ತಿಂಗಳುಗಳ ಕಾಲ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾದರೆ, ಈ ಸಮಯದಲ್ಲಿ ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದು ಹೇಗೆ? ಎಂಬ ಪ್ರಶ್ನೆ ಸಹಜ. ಇದಕ್ಕಾಗಿ, ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ 1958 ರಲ್ಲಿ ಆನಂದ ನಿಲಯಕ್ಕೆ ಚಿನ್ನದ ಲೇಪನ ಮಾಡಲಾಗಿದೆ. ಆ ಸಮಯದಲ್ಲಿ ಚಿನ್ನದ ಲೇಪನ ಮಾಡಲು ಸುಮಾರು ಎಂಟು ವರ್ಷ ಬೇಕಾಗಿತ್ತು. ಕ್ರಿ.ಶ 839 ರಲ್ಲಿ ಪಲ್ಲವ ರಾಜ ವಿಜಯ ದಂತಿವರ್ಮನ್ ಅವರು ಮೊದಲ ಬಾರಿಗೆ ಚಿನ್ನದ ಲೇಪನವನ್ನು ಮಾಡಿದ್ದರು. ಲಭ್ಯವಿರುವ ದಾಖಲೆಗಳ ಪ್ರಕಾರ, ಅಂದಿನಿಂದ, 1958 ರ ಪ್ರಯತ್ನವನ್ನು ಒಳಗೊಂಡಂತೆ, ಇಲ್ಲಿನ ಗೋಪುರದ ಚಿನ್ನದ ಲೇಪನವನ್ನು ಏಳು ಬಾರಿ ಬದಲಾಯಿಸಲಾಗಿದೆ ಅಥವಾ ಮಾರ್ಪಡಿಸಲಾಗಿದೆ.

ಮೂಲ ದೇವಾಲಯವನ್ನು ಪುನಃಸ್ಥಾಪಿಸುವವರೆಗೆ, ಎಲ್ಲಾ ದೈನಂದಿನ ಆಚರಣೆಗಳನ್ನು ತಾತ್ಕಾಲಿಕ ದೇವಾಲಯದಲ್ಲಿ ಮಾಡಲಾಗುವುದು ಮತ್ತು ಭಕ್ತರಿಗೆ ದೇವರ ದರ್ಶನವನ್ನು ಇಲ್ಲೇ ಒದಗಿಸಲಾಗುವುದು" ಎಂದು ದೀಕ್ಷಿತುಲು ಹೇಳಿದ್ದಾರೆ
ಅದಕ್ಕಾಗೇ ಯಾವ ಭಕ್ತರು ಆತಂಕ ಪಡುವ ಅಗತ್ಯವಿಲ್ಲ .