ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಸುಮಾರು ಹದಿನೈದು ವರ್ಷಗಳ ಕಾಲ ಲೀಡಿಂಗ್ ನಲ್ಲಿದ್ದ ನಟಿ. ಈಗಲೂ ಮೋಹಕ ತಾರೆ ರಮ್ಯ ಅವರ ಸಿನಿಮಾ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. 35ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸ್ಯಾಂಡಲ್ ವುಡ್, ಸೋಶಿಯಲ್ ಮೀಡಿಯಾಗಳಿಂದ ನಟಿ ರಮ್ಯಾ ಅವರು ದೂರ ಉಳಿದಿದ್ದರು. ಇದೀಗ ಮತ್ತೆ ಚಂದನವನದ ಕಡೆ ಒಲವು ತೋರಿದ್ದಾರೆ. ಇದೀಗ ಮತ್ತೊಂದು ಸಿನಿಮಾದಲ್ಲಿ ರಮ್ಯಾ ಅವರು ಕಾಣಿಸಿಕೊಂಡಿದ್ದಾರಂತೆ. ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ರಮ್ಯಾ ಅವರು ಯಾವ ಚಿತ್ರದಲ್ಲಿ ನಟಿಸಿದ್ದಾರೆ ಎಂಬ ವಿಚಾರ ಇನ್ನೂ ತಿಳಿದು ಬಂದಿಲ್ಲ.

ಇದೀಗ ರಮ್ಯಾ ಅವರು ರಾಜ್ ಬಿ ಶೆಟ್ಟಿ ಅವರ ಜೊತೆ ಸ್ವಾತಿ ಮುತ್ತಿನ ಮಳೆ ಹನಿಯ ಸಿನಿಮಾವನ್ನು ಪ್ರೊಡ್ಯೂಸ್ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸೆಕೆಂಡ್ ಇನ್ನಿಂಗ್ಸ್ ಪ್ರಾರಂಭಿಸುತ್ತಿದ್ದಾರೆ. ಅವಕಾಶ ಸಿಕ್ಕರೆ ರಮ್ಯಾ ಅವರು ನಟನೆಗೂ ಜೈ ಎನ್ನಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ರಮ್ಯಾ ಅವರು, ಎಲ್ಲಾ ನಟರ ಜೊತೆಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಅಮೂಲ್ಯ, ರಕ್ಷಿತಾ ಪ್ರೇಮ್, ದರ್ಶನ್, ರಕ್ಷಿತ್ ಶೆಟ್ಟಿ ಸೇರಿದಂತೆ ಹಲವರ ಜೊತೆ ಸಂಪರ್ಕದಲ್ಲಿದ್ದಾರೆ.

ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದ ರಮ್ಯಾ ಅವರು ಇದೀಗ ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಅವರ ಬಗ್ಗೆ ಮಾತನಾಡಿದ್ದಾರೆ. ದತ್ತ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ದರ್ಶನ್ ಅವರು ತುಂಬ ಒಳ್ಳೆಯವರು, ಸ್ನೇಹ ಮನೋಭಾವದ ಅವರು ಸಿನಿಮಾ ಚಿತ್ರೀಕರಣದ ವೇಳೆ ತುಂಬಾ ಕಾಮಿಡಿ ಮಾಡುತ್ತಿದ್ದರು ಎಂದಿದ್ದಾರೆ. ಇದೇ ವೇಳೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆಯೂ ಮಾತನಾಡಿ. ವಿಜಯಲಕ್ಷ್ಮಿ ತುಂಬಾ ಒಳ್ಳೆಯವರು. ಅವರ ಸ್ನೇಹ ತುಂಬಾ ಇಷ್ಟ ನನಗೆ ಎಂದು ಹೇಳಿದ್ದಾರೆ.

By Kumar K